Spread the love

ಮಣಿಪಾಲ: ದಿನಾಂಕ: 12/08/2024(ಹಾಯ್ ಉಡುಪಿ ನ್ಯೂಸ್) ಶಿವಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಮಣಿಪಾಲ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ರಾಘವೇಂದ್ರ ಸಿ ಅವರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್‌ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಅವರು ದಿನಾಂಕ:08-08-2024 ರಂದು  ಠಾಣೆಯ ಸಿಬ್ಬಂದಿಯವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಬಾಬಾಸ್‌ ಪಾಯಿಂಟ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಯುವಕನೋರ್ವನು  ಅಮಲಿನಲ್ಲಿದ್ದು, ಆ  ವ್ಯಕ್ತಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಆತನನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಆ ಯುವಕ ಗಾಂಜಾ ಸೇವನೆ ಮಾಡಿರುವ ಕುರಿತು ಪರೀಕ್ಷೆಗೆ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು,  ಆರೋಪಿ ನಿಹಾದ್‌ (27) ‌ ಈತನು ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿರುತ್ತದೆ ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಕಲಂ: 27 (b) ಎನ್‌ಡಿಪಿಎಸ್‌ ಕಾಯ್ದೆ BNS ರಂತೆ ಪ್ರಕರಣ ದಾಖಲಾಗಿದೆ.

error: No Copying!