Spread the love

ಕಾಪು: ದಿನಾಂಕ :13/08/2024 (ಹಾಯ್ ಉಡುಪಿ ನ್ಯೂಸ್) ಗುರುದೇವ ಬಾರ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನೋರ್ವನನ್ನು ಕಾಪು ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ (ಕಾ & ಸು) ಅಬ್ದುಲ್ ಖಾದರ್ ಅವರು ಬಂಧಿಸಿದ್ದಾರೆ.

ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಅಬ್ದುಲ್ ಖಾದರ್ ಅವರು ದಿನಾಂಕ:06-08-2024 ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಗುರುದೇವ ಬಾರ್ ಬಳಿ ಅವರಿಗೆ ಅನುಮಾನಾಸ್ಪದವಾಗಿ ಓರ್ವ ವ್ಯಕ್ತಿ ಕಂಡು ಬಂದಿದ್ದು, ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ಆತನನ್ನು ಸ್ಥಳದಲ್ಲಿಯೇ ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಆತನ ಹೆಸರು, ವಿಳಾಸ ವಿಚಾರಿಸಿದಾಗ ಆತನ ಹೆಸರು ವಿನೋದ್ ಕುಮಾರ್ (20) ಎಂಬುದಾಗಿ ತಿಳಿಸಿದ್ದು, ಆತನನ್ನು ವೈಧ್ಯಾದಿಕಾರಿಗಳು, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳವರ ಮುಂದೆ ಹಾಜರುಪಡಿಸಿದ್ದು, ಪರೀಕ್ಷಿಸಿದ ವೈದ್ಯರು ವಿನೋದ್ ಕುಮಾರ್ ಗಾಂಜಾ ಸೇವಿಸಿರುವ ಬಗ್ಗೆ ದಿನಾಂಕ 12/08/2024 ರಂದು ವೈಧ್ಯಕೀಯ ದೃಢಪತ್ರ ನೀಡಿರುತ್ತಾರೆ ಎನ್ನಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ ಕಲಂ: 27 (b) NDPS Act ರಂತೆ ಪ್ರಕರಣ ದಾಖಲಾಗಿದೆ.

error: No Copying!