- ಕಾರ್ಕಳ: ದಿನಾಂಕ:19-08-2024 (ಹಾಯ್ ಉಡುಪಿ ನ್ಯೂಸ್) ಹುಣಸೆಕಟ್ಟೆ ಕ್ರಷರ್ ಬಳಿಯಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆರು ಜನರನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ದಿಲೀಪ್ ಜಿ ಆರ್ ಅವರು ಬಂಧಿಸಿದ್ದಾರೆ.
- ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ದಿಲೀಪ್ ಜಿ ಆರ್ ಅವರಿಗೆ ದಿನಾಂಕ 18/08/2024 ರಂದು ಮಧ್ಯಾಹ್ನ ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿರುವ ಹಳೆಯ ಕೃಷರ್ ಬಳಿ ಸದಾನಂದ, ಗಣೇಶ್ , ಪ್ರಥಮ್, ಜಯರಾಜ್, ಸೂರ್ಯ ಮತ್ತು ರಾಜ ಎಂಬವರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿರುವುದಾಗಿ ಸಾರ್ವಜನಿಕ ರಿಂದ ಬಂದ ಖಚಿತ ಮಾಹಿತಿ ಮೇರೆಗೆ ಕೂಡಲೇ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .
- ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ ನಗದು ಹಣ 10,200/-, ಒಟ್ಟು ಇಸ್ಪೀಟ್ ಎಲೆಗಳು, ನೆಲಕ್ಕೆ ಹಾಸಿದ 2 ಹಳೆಯ ಪ್ಲಾಸ್ಟಿಕ್ ಗೋಣಿ ಚೀಲ, ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
- ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 87 KP Act ರಂತೆ ಪ್ರಕರಣ ದಾಖಲಾಗಿರುತ್ತದೆ.