ಕುಂದಾಪುರ: ದಿನಾಂಕ 31/08/2024 (ಹಾಯ್ ಉಡುಪಿ ನ್ಯೂಸ್) ಗುಲ್ವಾಡಿ ಗ್ರಾಮದ ಕರ್ಕಿ ಎಂಬಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಐದು ಜನರನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಭೀಮಾ ಶಂಕರ ಸಿನ್ನೂರ ಸಂಗಣ್ಣ ಅವರು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ (ಕಾ&ಸು) ಭೀಮಾ ಶಂಕರ ಸಿನ್ನೂರ ಸಂಗಣ್ಣ ಅವರಿಗೆ ದಿನಾಂಕ : 30-08-2024 ರಂದು ಗುಲ್ವಾಡಿ ಗ್ರಾಮದ ಕರ್ಕಿ ಎಂಬಲ್ಲಿರುವ ಶಾಂತಲಾ ಫೌಲ್ಟ್ರಿ ಫಾರ್ಮ್ ಬಳಿ ಇರುವ ಸರ್ಕಾರಿ ಹಾಡಿಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟು ಜುಗಾರಿ ಆಟವಾಡುತ್ತಿದ್ದಾರೆಂದು ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಕೂಡಲೇ ದಾಳಿ ನಡೆಸಿ 1) ಚಂದ್ರ, 2) ಚಂದ್ರ, 3) ಭಾಸ್ಕರ, 4) ರಾಜೇಶ್, 5) ರಾಘವೇಂದ್ರ ಎಂಬವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .
ಆಪಾದಿತರು ಇಸ್ಪೀಟ್ಜುಗಾರಿ ಆಟಕ್ಕೆ ಬಳಸಿದ್ದ ನಗದು ರೂಪಾಯಿ 950/-, ನೀಲಿ ಬಣ್ಣದ ಪ್ಲಾಸ್ಟಿಕ್, ಇಸ್ಪೀಟ್ ಎಲೆಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 87 KP Act ರಂತೆ ಪ್ರಕರಣ ದಾಖಲಾಗಿದೆ.
.