ಬೆಂಗಳೂರು: ದಿನಾಂಕ:24-09-2024 (ಹಾಯ್ ಉಡುಪಿ ನ್ಯೂಸ್)
ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕಿ ಇಲ್ಲ ಎಂದು ಪದೇ ಪದೇ ಎದೆ ತಟ್ಟಿ ಕೊಂಡು ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.