Spread the love

ದಿನಾಂಕ:25-09-2024 (ಹಾಯ್ ಉಡುಪಿ ನ್ಯೂಸ್)

ಇಂದು ದಿನಾಂಕ : 25/09/2024 ರಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ರವರನ್ನು ಆಯ್ಕೆ ಮಾಡಲಾಯಿತು .

ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾ ಪದಾಧಿಕಾರಿಗಳಾದ ಗೌರವಾಧ್ಯಕ್ಷರಾದ ಸುಂದರ. ಎ ಬಂಗೇರ. ಮಹಿಳಾ ಜಿಲ್ಲಾಧ್ಯಕ್ಷರಾದ ಗೀತ ಪಾಂಗಾಳ , ಜಿಲ್ಲಾ ಸಲಹೆಗಾರರಾದ ಪ್ರಕಾಶ್ ದೇವಾಡಿಗ. ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ  ಕೃಷ್ಣ ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ. ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು .

error: No Copying!