Spread the love

ಉಡುಪಿ: ದಿನಾಂಕ:06-10-2024 (ಹಾಯ್ ಉಡುಪಿ ನ್ಯೂಸ್) ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಕೋಟಾ ಶ್ರೀನಿವಾಸ ಪೂಜಾರಿ ಯವರ ಹೆಸರಿನಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು Shrinivas Poojari ಎಂಬ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಫ್ರೋಫೈಲ್ ಗೆ ಶ್ರೀಕೋಟಾ ಶ್ರೀನಿವಾಸ ಪೂಜಾರಿರವರ ಫೋಟೋವನ್ನು ದುರ್ಬಳಕೆ ಮಾಡಿ ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ಉಂಟು ಮಾಡುವ ಉದ್ದೇಶದಿಂದ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಕುಂದಾಪುರದ ವಕೀಲರಾದ ಶ್ಯಾಮಸುಂದರ ನಾಯರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ದೂರು ನೀಡಿದ್ದಾರೆ .ಈ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ  ಕಲಂ:296 BNSರಂತೆ ಪ್ರಕರಣ ದಾಖಲಾಗಿದೆ.

error: No Copying!