ಉಡುಪಿ: ದಿನಾಂಕ: 25-10-2024 (ಹಾಯ್ ಉಡುಪಿ ನ್ಯೂಸ್)
ಕರವೇ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ದಿನಾಂಕ: 24-10-2024 ರಂದು ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕರವೇ ಉಡುಪಿ ಜಿಲ್ಲಾ ಜಾಲತಾಣದ ಸಂಚಾಲಕಿಯಾಗಿ ಶ್ರೀಮತಿ ರಶ್ಮಿ ಅವರನ್ನು ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಾಳ ರವರು ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು.
ಈ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ ಕುಲಾಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಆಲ್ಫಾಸ್ ,ಗೋಪಾಲ್, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾದ ಕೃಷ್ಣಕುಮಾರ್, ಜಿಲ್ಲಾ ಮಹಿಳಾ ಕಾರ್ಯದರ್ಶಿಯಾದ ಚಂದ್ರಕಲಾ, ಮೋಹಿನಿ,ಜಿಲ್ಲಾ ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿಯಾದ ಆಶಾ, ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಸ್ಪ್ಯಾನಿ ಡಿಸೋಜ, ಸದಸ್ಯರಾದ ವಿಜಯ ಪೂಜಾರಿ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.