ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್. ಕೆ ಐಪಿಎಸ್ ಅವರ ನೇತೃತ್ವದಲ್ಲಿ ಡ್ರಗ್ಸ್ ವಿರುದ್ಧ ಸಮರ ಮುಂದುವರೆದಿದ್ದು. ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿಯ ಅಪಾರ್ಟ್ಮೆಂಟ್ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಹೊಂದಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 2 ಕೆಜಿ 340 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಸೆನ್ ಠಾಣಾ ಪಿಐ ಮತ್ತು ತಂಡ ಯಶಸ್ವಿಯಾಗಿರುತ್ತಾರೆ