ವಿಜಯಪುರ: ದಿನಾಂಕ:03-11-2024(ಹಾಯ್ ಉಡುಪಿ ನ್ಯೂಸ್)
ವಕ್ಫ್ ಅದಾಲತ್ ಮಾಡುವುದರಿಂದ ಸರ್ಕಾರಿ ನ್ಯಾಯಾಲಯಕ್ಕೆ
ಮಹತ್ವ ಕಡಿಮೆ ಆಗಲಿದೆ ,ಹೀಗಾಗಿ ಎಲ್ಲಿಯೂ ವಕ್ಫ್ ಅದಾಲತ್ ನಡೆಸಬಾರದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒತ್ತಾಯಿಸಿದ್ದಾರೆ.
ಕಾನೂನು ಬಾಹಿರವಾಗಿ ರೈತರ ,ಸಂಘ, ಸಂಸ್ಥೆಗಳ, ಮಠಮಾನ್ಯಗಳ ಜಮೀನು ಅಲ್ಲದೆ ಸರ್ಕಾರಿ ಜಮೀನು ಇತ್ಯಾದಿ ಆಸ್ತಿಗಳ ಮೂಲ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ನವೆಂಬರ್ 4 ರಿಂದ ಜಿಲ್ಲಾಧಿಕಾರಿ ಕಚೇರಿ ಹೊರಗೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಪ್ರಾರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ರೈತರ ಜಮೀನುಗಳ ದಾಖಲೆಗಳಲ್ಲಿ ವಕ್ಫ್ ಎಂದು ನಮೂದು ಮಾಡಿರುವುದನ್ನು ತೆಗೆದು ಹಾಕುವುದು ಹಾಗೂ ನೋಟಿಸ್ ಗಳನ್ನು ಹಿಂಪಡೆಯಬೇಕು ಮತ್ತು ಮುಂದೆಯೂ ನೋಟಿಸ್ ಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳು ಲಿಖಿತವಾಗಿ ಆದೇಶ ಹೊರಡಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.