ಕಾರ್ಕಳ: ದಿನಾಂಕ:18-11-2024(ಹಾಯ್ ಉಡುಪಿ ನ್ಯೂಸ್) ಕಾರ್ಕಳ ಬಿಲ್ಲವ ಮುಖಂಡರು, ಬಿಲ್ಲವ ಸಂಘದ ಅಧ್ಯಕ್ಷರಾದ ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾದ ಡಿ. ಆರ್. ರಾಜು ಪೂಜಾರಿ (64) ಅವರು ಹೃದಯಾಘಾತದಿಂದ ಭಾನುವಾರ ರಾತ್ರಿ ನಿಧನರಾಗಿದ್ದಾರೆ.
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲ್ಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎನ್ನಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.