ನವದೆಹಲಿ: ದಿನಾಂಕ:22-11-2024(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ನಿಯೋಗವು ಗುರುವಾರ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕ್ರಷಿಗೆ ನೆರವು ನೀಡುವ ಉದ್ದೇಶದಿಂದ ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲದ ಮೊತ್ತವನ್ನು ನಬಾರ್ಡ್ ಕಡಿತ ಗೊಳಿಸಿದ್ದಕ್ಕಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಹಾಗೂ ಸಾಲದ ಮೊತ್ತವನ್ನು ಹೆಚ್ಚಿಸುವಂತೆಯೂ ಮನವಿ ಸಲ್ಲಿಸಿದರು.
ನಬಾರ್ಡ್ ಮೊತ್ತ ಕಡಿತ ಮಾಡಿದ್ದರಿಂದ ರೈತರಿಗೆ ರಿಯಾಯಿತಿ ದರದಲ್ಲಿ ಸಾಲ ನೀಡಲು ಸಮಸ್ಯೆ ಯಾಗಿದೆ ಎಂದೂ ಸಿದ್ದರಾಮಯ್ಯ ಸಚಿವರಿಗೆ ಹೇಳಿದರು. ಸಾಲ ವಿತರಣೆಯಲ್ಲಿ ಆಗಿರುವ ಸಮಸ್ಯೆ ಗಳ ಬಗ್ಗೆ ನಿಯೋಗವು ಸಚಿವರಿಗೆ ಮನವರಿಕೆ ಮಾಡಿ ಕೊಟ್ಟಿತು.
ಆಗ ಕೇಂದ್ರ ಸಚಿವರು ಈ ಸಂಬಂಧ ಆರ್ ಬಿ ಐ ಗವರ್ನರ್ ಜೊತೆಗೆ ಸಮಾಲೋಚನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.