Spread the love

ನವದೆಹಲಿ: ದಿನಾಂಕ:29-11-2024(ಹಾಯ್ ಉಡುಪಿ ನ್ಯೂಸ್) ಸಂಪುಟ ಪುನಾರಚನೆ ಮತ್ತು ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಯವರೊಂದಿಗೆ ಚರ್ಚೆ ಮಾಡಿಲ್ಲ ಎಂದು ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಸುದ್ದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಳ್ಳಿ ಹಾಕಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ತಿಳಿಸಿದರು.

ಮಾಧ್ಯಮಗಳು ಸಂಪುಟ ಪುನರ್ ರಚನೆಯ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್‌ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದು ಹೇಳಿದರು.

error: No Copying!