ಬೆಂಗಳೂರು: ದಿನಾಂಕ:30-11-2024(ಹಾಯ್ ಉಡುಪಿ ನ್ಯೂಸ್) ಲೈಂಗಿಕ ಕಿರುಕುಳ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಕಾರ್ಯದರ್ಶಿ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಲೈಂಗಿಕ ಕಿರುಕುಳ ಮತ್ತು ಮಹಿಳೆಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿರುವ ಕಾರಣದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಶಿಸ್ತು ಕ್ರಮ ಸಮಿತಿಯ ಅಧ್ಯಕ್ಷರಾಗಿರುವ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
ಗುರಪ್ಪನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದು ಈ ಕ್ರಮಕ್ಕೆ ಕಾರಣ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರಪ್ಪನಾಯ್ಡು ಅವರು ಶಿಕ್ಷಕಿ ಓರ್ವರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿದ್ದಾರೆ.
ಗುರಪ್ಪನಾಯ್ಡು ವಿರುದ್ದ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡ ತ್ಯಾಗರಾಜನಗರದ ತಮ್ಮ ಖಾಸಗಿ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಗುರಪ್ಪ ನಾಯ್ಡು ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 506 (ಅಪರಾಧ ಬೆದರಿಕೆ), 509 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ) ಮತ್ತು 354 (ಮಹಿಳೆಯ ಮೇಲೆ ಆಕ್ರಮಣ ಅಥವಾ ಕ್ರಿಮಿನಲ್ ಇಚ್ಛೆಯಿಂದ ಅವಳ ನಮ್ರತೆಯನ್ನು ಕೆರಳಿಸುವುದು) ಅಡಿಯಲ್ಲಿ ನವೆಂಬರ್ 26 ರಂದು ಎಫ್ಐಆರ್ ದಾಖಲಾಗಿತ್ತು.