Spread the love

ಬೆಂಗಳೂರು: ದಿನಾಂಕ: 02-12-2024(ಹಾಯ್ ಉಡುಪಿ ನ್ಯೂಸ್)

ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ

ಕ್ರೀಡೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಹಾಜರಾತಿ ರಿಯಾಯಿತಿ ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 10 ಗ್ರೇಸ್ ಅಂಕಗಳನ್ನು ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ (ಕೆಒಎ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶೇ 25 ರಷ್ಟು ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ ಎಂದು ಹೇಳಿದರು.

ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳು ಭಾಗವಹಿಸಲು ಪ್ರೋತ್ಸಾಹಿಸಲು ಕೆಒಎ ಕಳೆದ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ಧ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದ್ದೇವೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ನಾಡಿನ ಕ್ರೀಡಾಳುಗಳಲ್ಲಿ ಮನವಿ ಮಾಡುತ್ತಿದ್ದೇನೆಂದು ತಿಳಿಸಿದರು.

ಚಿನ್ನದ ಪದಕ ಪಡೆದವರಿಗೆ ರೂ.6 ಕೋಟಿ ಮೀಸಲಿಟ್ಟಿದ್ದೇವೆ. ಬೆಳ್ಳಿ ಪದಕ ಪಡೆದವರಿಗೆ ರೂ.4 ಕೋಟಿ ಇಟ್ಟಿದ್ದೇವೆ. ಆದರೆ, ಯಾರೂ ಪದಕ ತರುತ್ತಿಲ್ಲ . ದೇಶಕ್ಕೆ ಯಾರಾದರೂ ಚಿನ್ನ ಗೆದ್ದು ತನ್ನಿ ಎಂದರು.

ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

error: No Copying!