- ಉಡುಪಿ: ದಿನಾಂಕ:02-12-2024(ಹಾಯ್ ಉಡುಪಿ ನ್ಯೂಸ್) ನಗರದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
- ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಹೊಸ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಆಪಾದಿತ ಇಕ್ಬಾಲ್ (33) ಎಂಬಾತ ದಿನಾಂಕ :30-11-2024 ರಂದು ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿರುವುದು ಕಂಡು ಉಡುಪಿ ನಗರ ಠಾಣೆಯ ಪೊಲೀಸರು ಆತನನ್ನು ಬಂಧಿಸಿ , ಆಪಾದಿತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ .
- ಆತನನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಇದೀಗ ಬಂದಿರುವ ತಜ್ಞರ ವರದಿಯಲ್ಲಿ ಆಪಾದಿತ ಇಕ್ಬಾಲ್ ನು ಗಾಂಜಾ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ ಎನ್ನಲಾಗಿದೆ.
- ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ , ಕಲಂ: 27(ಬಿ) ಎನ್‌ಡಿಪಿಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.