ನವದೆಹಲಿ: ದಿನಾಂಕ:07-12-2024 (ಹಾಯ್ ಉಡುಪಿ ನ್ಯೂಸ್)
ತನ್ನ ಮನೆಯ ಬಳಿ ಪರಿಸರದಲ್ಲಿ ವಾಕಿಂಗ್ ಮಾಡುತ್ತಿದ್ದ ಉದ್ಯಮಿಯೊಬ್ಬರಿಗೆ ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.ಇಂದು ಬೆಳಗ್ಗೆ ಪೂರ್ವ ದೆಹಲಿಯ ಶಾಹದಾರದಲ್ಲಿ ಈ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಉದ್ಯಮಿ ಸುನೀಲ್ ಜೈನ್ (52) ಎಂದು ಗುರುತಿಸಲಾಗಿದೆ. ಅವರ ಮೇಲೆ ಅನೇಕ ಬಾರಿ ಗುಂಡು ಹಾರಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಪಾತ್ರೆಗಳ ವ್ಯಾಪಾರ ನಡೆಸುತ್ತಿದ್ದ ಸುನೀಲ್ ಜೈನ್ ಅವರು ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ವಾಯುವಿಹಾರ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಫಾರ್ಷ್ ಬಜಾರ್ ಪ್ರದೇಶದಲ್ಲಿ ಇಬ್ಬರು ಮೋಟಾರ್‌ಸೈಕಲ್‌ನಲ್ಲಿ ಬಂದ ಅಪರಿಚಿತ ದಾಳಿಕೋರರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.