ಗಂಗೊಳ್ಳಿ: ದಿನಾಂಕ :12/12/2024 (ಹಾಯ್ ಉಡುಪಿ ನ್ಯೂಸ್) ಮರವಂತೆ ಸೀಲ್ಯಾಂಡ್ ಹೊಟೇಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಹರೀಶ ಆರ್ ಅವರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಹರೀಶ ಆರ್ ಅವರು ದಿನಾಂಕ:11-12-2024 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ಮರವಂತೆ ಗ್ರಾಮದ ಸೀಲ್ಯಾಂಡ್ ಹೊಟೇಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಅಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಮಹಾಬಲ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಮಂಜುನಾಥ ಎಂಬಾತನ ಸಹಾಯಕನಾಗಿದ್ದು ಮಂಜುನಾಥ ತನ್ನ ಮುಖಾಂತರ ಮಟ್ಕ ಚೀಟಿ ಬರೆಸುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಆತ ಮಟ್ಕಾ ಜುಗಾರಿಗೆ ಬಳಸಿದ ಮಟ್ಕಾ ಚೀಟಿ, ಬಾಲ್ ಪೆನ್ನು ಹಾಗೂ 1580/-ರೂಪಾಯಿಯನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 138/2024 ಕಲಂ: 112 BNS ಮತ್ತು ಕಲಂ: 78(iii) KP Act ರಂತೆ ಪ್ರಕರಣ ದಾಖಲಾಗಿದೆ.