- ಉಡುಪಿ: ದಿನಾಂಕ:14-12-2024(ಹಾಯ್ ಉಡುಪಿ ನ್ಯೂಸ್) ಮಣಿಪಾಲ ದಶರಥ ನಗರದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ.
- ದಿನಾಂಕ 13/12/2024 ರಂದು ಉಡುಪಿಯ ಶಿವಳ್ಳಿ ಗ್ರಾಮದ ಮಣಿಪಾಲ ದಶರಥ ನಗರದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ವಿವೇಕ್ (30) ಮತ್ತು ಅಭಿಷೇಕ್(23) ಎಂಬಿಬ್ಬರನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
- ಬಂಧಿತ ಆರೋಪಿಗಳನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ತಪಾಸಣೆಗೊಳಪಡಿಸಿದ್ದು ; ಜಿಲ್ಲಾ ಸರಕಾರಿ ಆಸ್ಪತ್ರೆ ಇಲ್ಲಿಂದ ಬಂದಿರುವ ತಜ್ಞರ ವರದಿಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎನ್ನಲಾಗಿದೆ
- ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಲಂ: 27 (b) ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.