ಉಡುಪಿ: ದಿನಾಂಕ:15-12-2024 (ಹಾಯ್ ಉಡುಪಿ ನ್ಯೂಸ್) ಡಯಾನಾ ಟಾಕೀಸು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಜಯಕರ ಎ ಅವರು ಬಂಧಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಜಯಕರ ಎ ಅವರು ದಿನಾಂಕ 14/12/2024 ರಂದು ಠಾಣಾ ಸರಹದ್ದಿನಲ್ಲಿ ಸಂಜೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಾರ್ವನಿಕರೊಬ್ಬರು ಕರೆ ಮಾಡಿ ಉಡುಪಿ ತಾಲ್ಲೂಕು 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯ ಡಯಾನ ಟಾಕೀಸ್ ಹತ್ತಿರದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಒರ್ವ ಯುವಕನು ಗಾಂಜಾದಂತಹ ಮಾದಕ ದ್ರವ್ಯವನ್ನು ಸೇವನೆ ಮಾಡಿ ಅಮಲಿನಲ್ಲಿರುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಮಾಹಿತಿ ಬಂದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದಾಗ ಅಲ್ಲಿ ಆಪಾದಿತ ಮಹಮ್ಮದ್ ನಿಸಾರ್, ಪ್ರಾಯ:28 ವರ್ಷ, 76 ಬಡಗುಬೆಟ್ಟು ಗ್ರಾಮ, ಉಡುಪಿ ಎಂಬಾತನು ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿರುವುದು ಕಂಡು ಬಂದಿದ್ದು, ಆಪಾದಿತ ಮಹಮ್ಮದ್ ನಿಸಾರ್ ನನ್ನು ಬಂಧಿಸಿ ವಶಕ್ಕೆ ಪಡೆದು, ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ತಜ್ಞರ ವರದಿಯಲ್ಲಿ ಆಪಾದಿತ ಮಹಮ್ಮದ್ ನಿಸಾರ್ ನು ನಿಷೇಧಿತ AMP ಗಾಂಜಾ ಎಂಬ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ ಎನ್ನಲಾಗಿದೆ
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 27(ಬಿ) ಎನ್‌ಡಿಪಿಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.