ಬ್ರಹ್ಮಾವರ: ದಿನಾಂಕ 26/12/2024(ಹಾಯ್ ಉಡುಪಿ ನ್ಯೂಸ್) ಬಾರ್ಕೂರು ರಘುರಾಮ ವೈನ್ಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಶೋಕ ಮಾಳಾಬಗಿ ಅವರು ಬಂಧಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ ಅವರಿಗೆ ದಿನಾಂಕ:24-12-2024 ರಂದು ಕಚ್ಚೂರು ಗ್ರಾಮದ, ಬಾರ್ಕೂರು ನಲ್ಲಿರುವ ರಘುರಾಮ ವೈನ್ಸ್ ಸಮೀಪದಲ್ಲಿರುವ ಮೊಬೈಲ್ ಅಂಗಡಿಯ ಎದುರುಗಡೆ ಸಾರ್ವಜನಿಕ ರಸ್ತೆ ಬದಿಯಲ್ಲಿ ಆರೋಪಿ ರವಿರಾಜ್ ಎಂಬಾತನು ಮಟ್ಕಾ ಜುಗಾರಿ ಆಟಕ್ಕಾಗಿ ಹಣವನ್ನು ಸಂಗ್ರಹಿಸುತ್ತಿರುವ ಬಗ್ಗೆ ಮಾಹಿತಿದಾರರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ಠಾಣಾ ಸಿಬ್ಬಂದಿರವರೊಂದಿಗೆ ದಾಳಿ ನಡೆಸಿ ಅಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿ ರವಿರಾಜ್ ಎಂಬವನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮಟ್ಕಾ ಜುಗಾರಿ ಆಟದಲ್ಲಿ 1 ರೂಪಾಯಿಗೆ 70 ರೂಪಾಯಿ ಹಣ ನೀಡುವುದಾಗಿ ತಿಳಿಸಿ, ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಉಡುಪಿ ಪುತ್ತೂರು ಅಂಬಾಗಿಲಿನ ನಿವಾಸಿಯಾದ ಆರೋಪಿ ಹರೀಶ ರವರಿಗೆ ಕೊಡುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ನಂತರ ಆರೋಪಿತ ರವಿರಾಜ್‌ನಿಂದ ಮಟ್ಕಾ ಜುಗಾರಿ ಆಟಕ್ಕೆ ಆತನು ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ಹಣ ರೂ 2490/-, ಮಟ್ಕಾ ಚೀಟಿ ಮತ್ತು ಬಾಲ್ ಪೆನ್ ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಕಲಂ 112 BNS And US 78 (i) (iii) KP Act ರಂತೆ ಪ್ರಕರಣ ದಾಖಲಾಗಿದೆ.