ಕಾರ್ಕಳ: ದಿನಾಂಕ :12-01-2025 (ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಬಂಗ್ಲೆ ಗುಡ್ಡೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಅವರು ಬಂಧಿಸಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಅವರು ದಿನಾಂಕ 11.01.2025 ರಂದು ಕಾರ್ಕಳ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಬಳಿ ರೌಂಡ್ಸ್ ನಲ್ಲಿರುವಾಗ ಆಪಾದಿತ ಅಲ್ತಾಫ್ ಬಾಬ್‌ಜಾನ್ (34) ಎಂಬಾತನು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಥವಾ ಮನೋದ್ರೇಕ ಅಮಲು ಪದಾರ್ಥ ಸೇವನೆ ಮಾಡುತ್ತಿದ್ದವನಂತೆ ವರ್ತನೆ ಮಾಡುತ್ತಿದ್ದವನನ್ನು ಸಂಶಯದ ಮೇರೆಗೆ ಬಂಧಿಸಿದ್ದಾರೆ .
ಆತನನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಪಾದಿತನು ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯರು ಧೃಢಪತ್ರ ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ 27(b) NDPS ACT ರಂತೆ ಪ್ರಕರಣ ದಾಖಲಾಗಿದೆ.