ಬೈಂದೂರು: ದಿನಾಂಕ: 13/01/2025 (ಹಾಯ್ ಉಡುಪಿ ನ್ಯೂಸ್) ಮರವಂತೆ ಬೀಚ್ ಬಳಿ ಮಾದಕವಸ್ತು ಮಾರಾಟ ಮಾಡಲು ಕಾರಿನಲ್ಲಿ ಬಂದಿದ್ದ ಐವರನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ.
ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರಿಗೆ ದಿನಾಂಕ:12-01-2025 ರಂದು ಬೈಂದೂರು ತಾಲೂಕು ಮರವಂತೆ ಬೀಚ್ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMA ಪೌಡರ್‌ಅನ್ನು ಗ್ರಾಹಕರಿಗೆ ಮಾರಾಟ ಮಾಡಲು ಬರುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೂಡಲೇ ಪೊಲೀಸ್ ಅಧೀಕ್ಷಕರ ಸೂಚನೆ ಪಡೆದು, ಸಿಬ್ಬಂದಿಯವರ ಸಹಕಾರದೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿ, ಅಲ್ಲಿ ಇದ್ದ ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ , ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಸಜ್ಜಾದ್ ಮುಸ್ತಕೀಮ್ ಕೆವಾಕ, ಎಂಬುವವರನ್ನು ಬಂಧಿಸಿ ಆಪಾದಿತರ ಬಳಿ ಇದ್ದ ಯಾವುದೇ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 15 ಗ್ರಾಂ 59 ಮಿಲಿ ಗ್ರಾಂ ತೂಕದ MDMA ಪೌಡರ್, ವಶಕ್ಕೆ ಪಡೆದಿದ್ದು MDMA ಪೌಡರ್ ಅಂದಾಜು ಮೌಲ್ಯ ರೂ. 78,000/- ಆಪಾದಿತರು ಬಳಸಿದ್ದ ಮೊಬೈಲ್ ಪೋನ್-5, ಅಂದಾಜು ಮೌಲ್ಯ ರೂ. 50,000/-, ಪಾರದರ್ಶಕ ಪ್ಲಾಸ್ಟಿಕ್ ಕವರ್-5, ಮಾದಕ ವಸ್ತು ಮಾರಾಟ ಮಾಡಲು ಬಳಸಿದ KA-20 MD-7053 ನೇ ನಂಬ್ರದ ಕಾರನ್ನು ಮುಂದಿನ ಕ್ರಮದ ಬಗ್ಗೆ ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ಸ್ವತ್ತುಗಳ ಒಟ್ಟು ಅಂದಾಜು ಮೌಲ್ಯ ರೂ. 11,28,000/- ಆಗಿರುತ್ತದೆ ಎನ್ನಲಾಗಿದೆ. ಆಪಾದಿತ ಅಬ್ರಾರ್ ಶೇಖ್ ಈತನು MDMA ಪೌಡರ್‌ಅನ್ನು ಬೆಂಗಳೂರಿನ ದಾವೂದ್ ಮತ್ತು ಇಸಾಕ್ ರವರಿಂದ ಖರೀದಿಸಿರುವ ಬಗ್ಗೆ ತನಿಖೆಯಲ್ಲಿ ನುಡಿದಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಲಂ: 22(b) NDPS Act ರಂತೆ ಪ್ರಕರಣ ದಾಖಲಾಗಿದೆ.