ಬೆಳಗಾವಿ: ದಿನಾಂಕ:14-01-2025(ಹಾಯ್ ಉಡುಪಿ ನ್ಯೂಸ್)
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸಚಿವೆ ಸಂಚರಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾತನಾಡಿ, “ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿದಿದೆ. ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ” ಎಂದು ಹೇಳಿದ್ದಾರೆ.