Spread the love

ದಿನಾಂಕ:18-01-2025(ಹಾಯ್ ಉಡುಪಿ ನ್ಯೂಸ್)

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಸಚಿವ ಹಾಗೂ ರಾಜ್ಯ ಬಿಜೆಪಿ ಆಂತರಿಕ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ನೀಡಿರುವ ಹೇಳಿಕೆ ಬಿ.ವೈ. ವಿಜಯೇಂದ್ರ ಬಣದಲ್ಲಿ ತಳಮಳ ಸೃಷ್ಟಿಸಿದೆ.

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಆಂತರಿಕ ಸಂಘರ್ಷ ತಾರಕಕ್ಕೇರಿರುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಎತ್ತಂಗಡಿಗೆ ಹೈಕಮಾಂಡ್ ಸಿದ್ಧತೆ ನಡೆಸಿದೆ.

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಸಚಿವ ಹಾಗೂ ರಾಜ್ಯ ಬಿಜೆಪಿ ಆಂತರಿಕ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ನೀಡಿರುವ ಹೇಳಿಕೆ ಬಿ.ವೈ. ವಿಜಯೇಂದ್ರ ಬಣದಲ್ಲಿ ತಳಮಳ ಸೃಷ್ಟಿಸಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದರು.

ರಾಜ್ಯ ಘಟಕದ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಚರ್ಚಿಸಿಯೇ ಆಯ್ಕೆ ಮಾಡುತ್ತೇವೆ. ಬೂತ್ ಸಮಿತಿ ಅಧ್ಯಕ್ಷರಿಂದ ಮೊದಲ್ಗೊಂಡು ರಾಜ್ಯ ಘಟಕದವರೆಗೂ ಚುನಾವಣೆ ನಡೆಯಲಿದೆ ಎಂದರು.

ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಶಾಸಕರಾದ ಬಸನಗೌಡ ಪಾಟೀಲ ಯಾತ್ನಾಳ್, ರಮೇಶ್ ಜಾರಕಿಹೊಳಿ ತಂಡ ಪಟ್ಟು ಹಿಡಿದಿದ್ದು, ಅಧ್ಯಕ್ಷನಾಗಿ ನಾನೇ ಮುಂದುವರೆಯುವೆ ಎಂದು ವಿಜಯೇಂದ್ರ ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಶಿವರಾಜ್ ಸಿಂಗ್ ಚೌಹಾಣ್ ನೀಡಿರುವ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

error: No Copying!