Spread the love

ಮಣಿಪಾಲ: ದಿನಾಂಕ: 20/01/2025 (ಹಾಯ್ ಉಡುಪಿ ನ್ಯೂಸ್) ಪರ್ಕಳ ಬಸ್ ನಿಲ್ದಾಣದ ಬಳಿಯ ಲಾಡ್ಜ್ ಒಂದಕ್ಕೆ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ   ರಾಮಚಂದ್ರ ನಾಯಕ್‌ ಅವರು ದಾಳಿ ನಡೆಸಿ ಅಲ್ಲಿ ಬಲವಂತವಾಗಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಸೆನ್‌ ಪೊಲೀಸ್‌ ಠಾಣೆ, ಮಣಿಪಾಲದ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ದಿನಾಂಕ:19-01-2025 ರಂದು ಸೆನ್‌ ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಹೆರ್ಗ ಗ್ರಾಮದ  ಪರ್ಕಳ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀ ಸಾಯಿ ಲಾಡ್ಜ್‌ ನಲ್ಲಿ  ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಮಾಹಿತಿದಾರರಿಂದ ಖಚಿತ ಮಾಹಿತಿ ಬಂದಿದೆ ಎನ್ನಲಾಗಿದೆ.

ಬಂದ ಮಾಹಿತಿಯಂತೆ  ಪೊಲೀಸ್‌ ಅಧೀಕ್ಷಕರ ಸೂಚನೆಯಂತೆ ಪೊಲೀಸ್ ಸಿಬ್ಬಂದಿಯವರೊಂದಿಗೆ ಕೂಡಲೇ ಪರ್ಕಳದ ಶ್ರೀ ಸಾಯಿ ಲಾಡ್ಜ್ ಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿತ ಶರಣಪ್ಪ ಎಂಬವನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ   06/2025 ಕಲಂ: 143 BNS & 3,4,5,6 ITP Act ರಂತೆ ಪ್ರಕರಣ ದಾಖಲಾಗಿದೆ.

error: No Copying!