
ಬೆಂಗಳೂರು: ದಿನಾಂಕ:02-02-2025(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ಧರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ.