
ಉಡುಪಿ: ದಿನಾಂಕ:09-02-2025(ಹಾಯ್ ಉಡುಪಿ ನ್ಯೂಸ್)
ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗೋಪಾಲ್ ದೊರೆ ಅವರನ್ನು ಆಯ್ಕೆ ಮಾಡಲಾಯಿತು.
ಗೋಪಾಲ್ ದೊರೆ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಜಿಲ್ಲಾ ಮಹಿಳಾ ಜಿಲ್ಲಾಧ್ಯಕ್ಷರು ಗೀತಾಪಾಂಗಾಳ. ಜಿಲ್ಲಾ ಮಹಿಳಾ ಉಪಾಧ್ಯಕ್ಷರು ದೇವಕಿ ಬಾರ್ಕೂರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್. ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಪೂಜಾರಿ. ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಕುಮಾರ್ . ಜಿಲ್ಲಾ ಕಾರ್ಮಿಕ ಉಪಾಧ್ಯಕ್ಷರಾದ ದೇವೇಂದ್ರ ಪೂಜಾರಿ. ಜಿಲ್ಲಾ ಸದಸ್ಯರಾದ ಪರಶುರಾಮ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.