
ಅಜೆಕಾರು: ದಿನಾಂಕ :09-03-2025 (ಹಾಯ್ ಉಡುಪಿ ನ್ಯೂಸ್) ಕುಕ್ಕುಜೆ ಗ್ರಾಮದ ನಿವಾಸಿ ಆಟೋರಿಕ್ಷಾ ಚಾಲಕ ಸೂರ್ಯ ಎಂಬವರು ಕಾಣೆಯಾಗಿರುವ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಕಳ ,ಕುಕ್ಕುಜೆ ಗ್ರಾಮದ ನಿವಾಸಿ ಶ್ರೀಮತಿ ಬೇಬಿ (49) ಎಂಬವರ ಗಂಡ ಸೂರ್ಯ (52) ರವರು ಪೆರ್ಡೂರು ಮೇಲ್ ಪೇಟೆಯಲ್ಲಿ ರಿಕ್ಷಾ ಚಾಲಕರಾಗಿ ಕೆಲಸಮಾಡಿಕೊಂಡಿದ್ದು, ಸೂರ್ಯ ರವರು ದಿನಾಂಕ 07/03/2025 ರಂದು ಬೆಳಿಗ್ಗೆ ಸುಮಾರು 11:00 ಗಂಟೆಯ ಸಮಯಕ್ಕೆ ಮನೆಯಿಂದ ಪೆರ್ಡೂರುಗೆ ಹೋಗಿ ಬರುತ್ತೇನೆ ಎಂದು ಹೋದವರು ಇದುವರೆಗೆ ವಾಪಾಸ್ಸು ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಪೆರ್ಡೂರುನಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿದಲ್ಲಿ ಇದುವರೆಗೂ ಪತ್ತೆಯಾಗಿರುವುದಿಲ್ಲ ಎಂದು ಶ್ರೀಮತಿ ಬೇಬಿ ರವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿದೆ.