ಉಡುಪಿ: ದಿನಾಂಕ:14-03-2025 (ಹಾಯ್ ಉಡುಪಿ ನ್ಯೂಸ್) ತೆರದ ಮನೆ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಠಾಣೆಯ ವ್ಯಾಪ್ತಿಯ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಮಕ್ಕಳಿಗೆ ಸಂಚಾರ ನಿಯಮಗಳು, ರಸ್ತೆಯ ಅಪಘಾತಗಳ ಬಗ್ಗೆ, ಮಕ್ಕಳ ಹಕ್ಕುಗಳು, ಬಾಲ್ಯವಿವಾಹ, ಬಾಲಕಾರ್ಮಿಕ ಕಾಯ್ದೆ, ಬಗ್ಗೆ ಕಾನೂನು ಮಾಹಿತಿ ನೀಡಿದರು.