Spread the love

ಮಂಗಳೂರು: ದಿನಾಂಕ:16-03-2025(ಹಾಯ್ ಉಡುಪಿ ನ್ಯೂಸ್) ಮಂಗಳೂರು ನಗರ ಪೊಲೀಸರು ಕೈಗೊಂಡ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸಿಕೊಂಡು ದೇಶದ್ಯಾಂತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ದೇಶದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಬಾಂಬಾ ಫಾಂಟಾ ಯಾನೆ ಅಡೋನಿಸ್‌ ಜಬುಲಿಲೆ (31 ) ಅಬಿಗೈಲ್‌ ಅಡೋನಿಸ್ (30) ಎಂಬಿಬ್ಬರು ಬಂಧಿತರು. “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ನಗರಕ್ಕೆ. ಕರ್ನಾಟಕ ರಾಜ್ಯಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ದೇಶದ ವಿದೇಶಿ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿ 75 ಕೋಟಿ ಮೌಲ್ಯದ 37.870 ಕೆಜಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

error: No Copying!