Spread the love

ಬೆಂಗಳೂರು: ದಿನಾಂಕ:17-03-2025 (ಹಾಯ್ ಉಡುಪಿ ನ್ಯೂಸ್) ದಲಿತ ಸಮುದಾಯಕ್ಕೆ ಗುಜರಾತ್ ಬಿಜೆಪಿ ಸರ್ಕಾರ 2.38% ರಷ್ಟು, ಮಹಾರಾಷ್ಟ್ರ 3.6% ಹಾಗೂ ಕೇಂದ್ರ ಸರ್ಕಾರ  ಕೇವಲ 2.87% ಮಾತ್ರ ಹಣ ಬಜೆಟ್‌ನಲ್ಲಿ ತೆಗೆದಿಟ್ಟಿದೆ. ಆದರೆ ಕಾಂಗ್ರೆಸ್ ಸರ್ಕಾರ ಶೇ. 7.46 ರಷ್ಟು ಹಣ ಮೀಸಲಿಟ್ಟು, ಖರ್ಚು ಮಾಡಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು, ಕರ್ನಾಟಕ ಮಾದರಿಯಲ್ಲೇ ಕೇಂದ್ರ ಸರ್ಕಾರ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಲಿ ಎಂದು ಸರ್ವಾನುಮತದ ನಿರ್ಣಯ ಮಾಡೋಣ ಎಂದು ಕರೆ ನೀಡಿದರು.

ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಇಂದಿನವರೆಗೆ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆಯನ್ನು ಜಾರಿ ಮಾಡಿಲ್ಲ. ಕಳೆದ ಸಾಲಿನಲ್ಲಿ ಕರ್ನಾಟಕದಲ್ಲಿ 3,71,273 ಕೋಟಿ ರೂ.ಗಳ ಬಜೆಟ್‌ನಲ್ಲಿ ₹27,674 ಕೋಟಿ ಎಸ್.ಸಿ.ಎಸ್.ಪಿ ಗಾಗಿಯೇ ಅಂದರೆ ಶೇ. 7.46% ಮೀಸಲಿಟ್ಟಿದೆ. ಗುಜರಾತ್‌ನ ಬಜೆಟ್ ಗಾತ್ರ ₹3,70,000 ಕೋಟಿ, ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಗಾಗಿ ಶೇ 2.38% ಮೀಸಲಿಟ್ಟಿದ್ದಾರೆ. ಮಹಾರಾಷ್ಟ್ರದ ಬಜೆಟ್ ₹6,12,293 ಕೋಟಿ ಇದ್ದರೆ, 18,765 ಕೋಟಿ ಇಟ್ಟಿದ್ದಾರೆ. ಇದು ಬಜೆಟ್‌ನ 3.6% ಇದೆ. ಕೇಂದ್ರ ಸರ್ಕಾರದ ₹48,20,512 ಕೋಟಿ ಬಜೆಟ್‌ನಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಗಾಗಿ ₹1,38,368 ಕೋಟಿ ಇದ್ದು, ಬಜೆಟ್‌ನ ಗಾತ್ರಕ್ಕೆ ಹೋಲಿಸಿದಲ್ಲಿ 2.87% ಮೀಸಲಿಟ್ಟಿದೆ. ಕರ್ನಾಟಕ ಮಾದರಿಯಲ್ಲೇ ಕೇಂದ್ರ ಸರ್ಕಾರ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಲಿ ಎಂದು ಸರ್ವಾನುಮತದ ನಿರ್ಣಯ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಬಿಜೆಪಿ ಆರ್‌ಎಸ್‌ಎಸ್ ಹೇಳಿದಂತೆ ಮಾಡುತ್ತದೆ. ಆರ್‌ಎಸ್‌ಎಸ್ ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷದವರಿಗೆ ಹೇಳಿದರು. ದಲಿತರ, ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ. 1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು ನೀವು. ನೀವು ಬ್ರಿಟಿಷರ ಏಜೆಂಟರು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆರೋಪಿಸಿದರು.

error: No Copying!