
ಕುಂದಾಪುರ: ದಿನಾಂಕ:22-03-2025(ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಆಡಳಿತಾಧಿಕಾರಿ ಕಾಂತರಾಜು ಎಂಬವರ ಕರ್ತವ್ಯ ಲೋಪ, ಸಾರ್ವಜನಿಕರೊಂದಿಗೆ ದುರ್ವರ್ತನೆ ಇವೆಲ್ಲವುಗಳನ್ನು ಗಮನಿಸಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ.
ಕುಂದಾಪುರ ತಾಲೂಕು , ಕಸಬಾ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಕಾಂತರಾಜು ಅವರ ವಿರುದ್ಧ ಸಾರ್ವಜನಿಕರಿಂದ ಮೌಖಿಕವಾಗಿ ಪದೇ ಪದೇ ದೂರುಗಳು ಸ್ವೀಕೃತವಾಗುತ್ತಿರುವುದು ಹಾಗೂ ಸರ್ಕಾರಿ ಸೇವೆಯಲ್ಲಿ ಸರಿಯಾಗಿ ಕರ್ತವ್ಯವನ್ನು ನಿರ್ವಹಿಸದೇ ಕಾಲಹರಣ ಮಾಡುತ್ತಿರುವುದು ಕಂಡು ಬಂದ ಕಾರಣದಿಂದ ಸರ್ಕಾರಿ ಸೇವೆಯಲ್ಲಿ ಸಾರ್ವಜನಿಕರೊಂದಿಗೆ ಹಾಗೂ ಮೇಲಾಧಿಕಾರಿಗಳೊಂದಿಗೆ ಸರಿಯಾಗಿ ಸ್ಪಂದನೆಯನ್ನು ನೀಡದೇ ಇರುವುದರಿಂದ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021 ರ ನಿಯಮ 3(1)(11)(111) ಹಾಗೂ 3(2) ನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಕಾರಣ ನೀಡಿ ಕಾಂತರಾಜು ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಗೊಳಿಸಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಕೆ ವಿದ್ಯಾ ಕುಮಾರಿ ಅವರು ಆದೇಶಿಸಿದ್ದಾರೆ.