Spread the love

ಮಣಿಪಾಲ: ದಿನಾಂಕ 25/03/2025 (ಹಾಯ್ ಉಡುಪಿ ನ್ಯೂಸ್) ಅನಂತನಗರದ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಮಣಿಪಾಲ ಪೊಲೀಸ್‌ ಠಾಣೆಯ ಪಿಎಸ್ಐ ಯವರಾದ ಅನಿಲ್ ಕುಮಾರ್ ಅವರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ  ಪಿಎಸ್ಐಯವರಾದ ಅನೀಲ ಕುಮಾರ್ ರವರು ದಿನಾಂಕ: 22-03-2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅನಂತನಗರದ ಕಾರ್ತಿಕ್‌ ನಾರಾಯಣ ಅಪಾರ್ಟ್‌ಮೆಂಟ್ ಎದುರು ಸಾರ್ವಜನಿಕ ಸ್ಥಳದಲ್ಲಿ ಕಾಗೊ ಅಬಿಯಾ(22) ಎಂಬಾತ ಅಮಲಿನಲ್ಲಿದ್ದು, ಆತನು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಬಂಧಿಸಿ ಆತನನ್ನು ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದಾರೆ.

ದಿನಾಂಕ 24/03/2025 ರಂದು ಆರೋಪಿಯು ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಕಲಂ: ಕಲಂ 27 (b) NDPS ACT ರಂತೆ ಪ್ರಕರಣ ದಾಖಲಾಗಿದೆ.

error: No Copying!