Spread the love

ಉಡುಪಿ: ಹಿಜಾಬ್ ವಿಷಯ ದಿಂದಾಗಿ ಅಥವಾ ಇತರ ಯಾವುದೇ ಕಾರಣಗಳಿಂದಾಗಿ ಕಾಲೇಜಿಗೆ ಹೋಗಲು ಸಾಧ್ಯವಾಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಉಚಿತ ಆನ್ಲೈನ್ ಶಿಕ್ಷಣದ ವ್ಯವಸ್ಥೆ ಒದಗಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪಿ.ಯು.ಸಿ ಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿಷಯಗಳ ಬಗ್ಗೆ ತಜ್ಞ ಉಪನ್ಯಾಸಕರು ಆನ್ ಲೈನ್ ಮೂಲಕ ತರಗತಿ ನಡೆಸಿ ಕೊಡಲಿದ್ದಾರೆ. ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಕುರಿತು ವಿವರಗಳಿಗಾಗಿ ಮೊ.ಸಂಖ್ಯೆ:9663638666 ನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: No Copying!