Spread the love

ದಿನಾಂಕ:10-04-2025(ಹಾಯ್ ಉಡುಪಿ ನ್ಯೂಸ್)

ಮುಡಾ ಹಗರಣದ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ವಿಷಯದಲ್ಲಿ ಸಿಎಂ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು ಸಿಎಂ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. 2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ಆರೋಪಿಸಿದ್ದಾರೆ.

error: No Copying!