
ಬೆಂಗಳೂರು: ದಿನಾಂಕ:25-04-2025(ಹಾಯ್ ಉಡುಪಿ ನ್ಯೂಸ್)
ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚನೆ ನೀಡಿದೆ. ಈ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸಂದೇಶ ರವಾನಿಸಿದ್ದಾರೆ.
ಈ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ‘ಇಲ್ಲಿ ಅಕ್ರಮವಾಗಿ ನೆಲೆಸಿರುವವರ ಮೇಲೆ ನಿಗಾ ಇಡಬೇಕು, ಅಕ್ರಮ ನಿವಾಸಿಗಳನ್ನು ಗುರುತಿಸಿ ಗಡೀಪಾರು ಮಾಡಬೇಕು ಎಂದು ಹೇಳಿದ್ದಾರೆ. ಯಾವುದೇ ಸ್ಲೀಪರ್ ಸೆಲ್‌ಗಳನ್ನು (ಗುಪ್ತ ಭಯೋತ್ಪಾದಕ ಗುಂಪುಗಳು) ಪತ್ತೆಹಚ್ಚಿದರೆ, ರಾಷ್ಟ್ರೀಯ ಭದ್ರತೆಯನ್ನು ಖಾತರಿಪಡಿಸುವ ಸಲುವಾಗಿ ನಾವು ಆ ಮಾಹಿತಿಯನ್ನು ಕೇಂದ್ರ ಸರ್ಕಾರದೊಂದಿಗೆ ತಕ್ಷಣವೇ ಹಂಚಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.