ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ವೇಳೆ ರಷ್ಯಾದ ಶೆಲ್ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಕರ‍್ನಾಟಕದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್ ಮೃತದೇಹ ಸಿಕ್ಕಿದೆ ಎಂದು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬೊಮ್ಮಾಯಿ, “ಉಕ್ರೇನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚಳಗೇರಿಯ ವೈದ್ಯಕೀಯ ವಿದ್ಯರ‍್ಥಿ ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಯುದ್ಧ ಇನ್ನೂ ನಡೆಯುತ್ತಿದೆ,” ಎಂದು ಹೇಳಿದರು.
“ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂರ‍್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತೇವೆ,” ಎಂದು ತಿಳಿಸಿದರು.
ಹದಿಮೂರನೇ ದಿನವೂ ಉಕ್ರೇನ್- ರಷ್ಯಾ ಯುದ್ಧ ನಡೆಯುತ್ತಿದೆ. ಜೊತೆಗೆ ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿ ನಡೆಸುತ್ತಿದೆ. ಅದು ನಿಂತ ಮೇಲೆ ಮೃತ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತ್ರವಲ್ಲದೆ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ನಾಯಕರು ಚಳಗೇರಿಯ ನವೀನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ನವೀನ್ ಕುಟುಂಬಸ್ಥರು ಮಾತ್ರ ನವೀನ್ ಮೃತದೇಹವಾದರೂ ಭಾರತಕ್ಕೆ ಮರಳಬೇಕು ಎಂಬ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ, ಅದು ಸಾಧ್ಯವೇ ಇಲ್ಲವೇ ಎಂಬ ಬಗ್ಗೆ ಹಲವು ರಾಜಕಾರಣಿಗಳು ಹೇಳಿಕೆ ನೀಡುತ್ತಿದ್ದರು. ರ‍್ಕಾರ ತನ್ನ ಪ್ರಯತ್ನ ತಾನು ಮಾಡುತ್ತಿದೆ ಎಂದು ಹೇಳುತ್ತಲೇ ಬಂದಿತ್ತು.
ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ನವೀನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ನವೀನ್ ತಂದೆಗೆ ೨೫ ಲಕ್ಷ ರೂ. ಪರಿಹಾರ ಚೆಕ್ ನೀಡಿದ್ದರು.
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಮೃತರಾದ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ನಿವಾಸಕ್ಕೆ ಸಿರಿಗೆರೆ ಡಾ. ಶಿವಮರ‍್ತಿ ಶಿವಾಚರ‍್ಯ ಶ್ರೀಗಳು ಭೇಟಿ ನೀಡಿ ನವೀನ್ ಭಾವಚಿತ್ರಕ್ಕೆ ಪುಷ್ಪ ಸರ‍್ಪಿಸಿ, ಕುಟುಂಬದವರಿಗೆ ಸಾಂತ್ವನ ಮತ್ತು ಧರ‍್ಯ ತುಂಬಿದ್ದಾರೆ.
ಉಕ್ರೇನ್ ದೇಶದ ಕರ‍್ಕಿವ್‌ನಲ್ಲಿ ೪ನೇ ರ‍್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ತರಲು ಹೋಗಿದ್ದ ಸಂರ‍್ಭದಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಬಲಿಯಾಗಿದ್ದರು.