ಮೈಸೂರು: ಪ್ರಧಾನಮಂತ್ರಿ ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು.
ರಾಜ್ಯದಲ್ಲಿ ಜನ್ ಔಷಧಿ ಬಳಸುವಂತೆ ಆರೋಗ್ಯ ಸಚಿವರು ಮನವಿ ಮಾಡಿಕೊಂಡಿದ್ದು, ಸರ್ಕಾರಿ ವೈದ್ಯರು ಔಷಧಿ ಸೂಚಿಸುವಾಗ ಖಾಸಗಿ ಕಂಪನಿ ಹೆಸರು ಉಲ್ಲೇಖಿಸಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ. ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಲಭ್ಯವಿರುವಂತೆ ನೋಡಿಕೊಳ್ಳಲಾಗುವುದು. ಸದ್ಯ ಜನ್ ಔಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೆ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರ ತೆರೆಯಲಾಗುವುದು. ಕೆಲವರಿಗೆ ಧರಿಸಲು ಬ್ರಾಂಡೆಡ್ ಬಟ್ಟೆಯೇ ಬೇಕು ಅಂತಹವರು ಬೇರೆ ಬ್ರಾಂಡ್ ಔಷಧಿ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.