
ಉಡುಪಿ : ದಿನಾಂಕ :06-05-2025(ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆಯು ಅನ್ಸಾರ್ ಅಹಮದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ ರವರ ನೇತೃತ್ವದಲ್ಲಿ ಸಭೆ ನಡೆದು ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು.
ಕರವೇ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಸಯ್ಯದ್ ನಿಜಾಮ್, ಅಲ್ಫೋನ್ಸ್ ಮಿನೇಜಸ್, ಸುಧೀರ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಪೂಜಾರಿ ಕಾರ್ಯದರ್ಶಿಯಾಗಿ ಸಂತೋಷ ಕುಲಾಲ ಸಂಘಟನಾ ಕಾರ್ಯದರ್ಶಿಯಾಗಿ ಗೋಪಾಲ್ ದೊರೆಯವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಶಾಂತ್ ಸಾಲಿಯಾನ್ ಪಡುಬಿದ್ರೆ, ರತ್ನಾಕರ್ ಪೂಜಾರಿ, ರಾಘವೇಂದ್ರ ಪೂಜಾರಿ, ಪ್ರಕಾಶ್ ದೇವಾಡಿಗ, ನಾಗರಾಜ್ ಹಾಗೂ ರಾಜು ರವರನ್ನು ಆಯ್ಕೆ ಮಾಡಲಾಯಿತು.
ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ದೇವಕಿ ಬಾರ್ಕೂರು, ಕಿರಣ್ ಪ್ರತಾಪ್ ರವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ, ಕಾರ್ಯದರ್ಶಿಯಾಗಿ ಡಾ.ಶಶಿಕಲಾ, ಸಂಘಟನಾ ಕಾರ್ಯದರ್ಶಿಯಾಗಿ ವಿಶಾಲಾಕ್ಷಿಯವರನ್ನು ಆಯ್ಕೆ ಮಾಡಲಾಯಿತು.
ಉಡುಪಿ ತಾಲೂಕು ಅಧ್ಯಕ್ಷರಾಗಿ ಯತೀಶ್, ಬ್ರಹ್ಮಾವರ ತಾಲೂಕು ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ, ಕಾಪು ತಾಲೂಕು ಅಧ್ಯಕ್ಷರಾಗಿ ಚೇತನ್ ಪಡುಬಿದ್ರೆ, ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಹನೀಫ್ ಕಾರ್ಕಳ, ಹೆಬ್ರಿ ತಾಲೂಕು ಅಧ್ಯಕ್ಷರಾಗಿ ವಿಜಯೇಂದ್ರ ಹೆಬ್ರಿ, ಬೈಂದೂರು ತಾಲೂಕು ಅಧ್ಯಕ್ಷರಾಗಿ ನಾಗೇಶ್ ರವರು ಆಯ್ಕೆಯಾದರು. ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರೆಲ್ಲರೂ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.