Spread the love
  • ಉಡುಪಿ: ದಿನಾಂಕ:08-05-2025(ಹಾಯ್ ಉಡುಪಿ ನ್ಯೂಸ್) ನೇಜಾರು ಪರಿಸರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಸೆನ್ ಅಪರಾಧ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
  • ಸೆನ್ ಅಪರಾಧ ಪೊಲೀಸ್‌ ಠಾಣೆಯ ಪೊಲೀಸರು ದಿನಾಂಕ 07/05/2025 ರಂದು ‌ಉಡುಪಿ ತಾಲೂಕು, ನೇಜಾರಿನ ತೃಪ್ತಿ ಲೇಔಟ್‌ ಪೆಟ್ರೋಲ್‌ ಪಂಪ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಮಹಮ್ಮದ್ ಸಾಲಿಕ್‌ (19) ಎಂಬಾತನನ್ನು ಹಾಗೂ ನೇಜಾರಿನ ಜ್ಯೋತಿ ನಗರದ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಮೊಹಮ್ಮದ್ ಸಲೀಮ್ (20) ಎಂಬವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .
  • ಈರ್ವರನ್ನೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ತಪಾಸಣೆಗೊಳಪಡಿಸಿದ್ದು, ವೈದ್ಯರು ನೀಡಿದ ವರದಿಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎನ್ನಲಾಗಿದೆ.
  • ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌  ಠಾಣೆಯಲ್ಲಿ  ಕಲಂ: 27 (b) NDPS ACT ರಂತೆ ಪ್ರಕರಣ ದಾಖಲಾಗಿದೆ.

error: No Copying!