Spread the love

ಉಡುಪಿ: ದಿನಾಂಕ: 17-05-2025(ಹಾಯ್ ಉಡುಪಿ ನ್ಯೂಸ್) ತಾಲೂಕು ಕಚೇರಿ ಎದುರು ಸಾರ್ವಜನಿಕ ಸ್ಥಳದಲ್ಲಿ ತಮ್ಮೊಳಗೆ ಜಗಳವಾಡುತ್ತ ಸಾರ್ವಜನಿಕ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ ಆರೋಪದ ಮೇಲೆ 12 ಜನರನ್ನು ಉಡುಪಿ ನಗರ ಪೊಲೀಸ್ ಠಾಣೆಯ  ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ನವೀನ್ ದೇವಾಡಿಗ ಅವರು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್‌ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ನವೀನ್ ದೇವಾಡಿಗ ಅವರು ದಿನಾಂಕ 16/05/2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಧ್ಯಾಹ್ನ ಉಡುಪಿ ಮೂಡನಿಡಂಬೂರು ಗ್ರಾಮದ ಹೊಸ ತಾಲೂಕು ಕಚೇರಿ ಎದುರು ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳಾದ 1) ಸುಹಾಸಿನಿ , 2) ಪ್ರಸಾದ್, 3) ಪುನೀತ್ , 4) ಜಯಂತಿ, 5) ಮಮತ, 6) ವಿಜಯಲಕ್ಷ್ಮಿ , 7) ಕೃಷ್ಣ ವೇಣಿ, 8) ಲಕ್ಷ್ಮಿ , 9) ಶಂಕರವ್ವ , 10) ಭಾರತಿ, 11) ಸುಮಂತ್ , 12) ಮಣಿಕಂಠ ಎಂಬವರುಗಳು ತಮ್ಮೊಳಗೆ ಜಗಳವಾಡುತ್ತಾ ಅವಾಚ್ಯ ಶಬ್ದಗಳಿಂದ ಬೈದಾಡುತ್ತಾ ಪರಸ್ಪರ ದೂಡಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸ್ ಉಪ ನಿರೀಕ್ಷಕರಾದ ನವೀನ್ ದೇವಾಡಿಗ ಅವರು ಅವರುಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಮಾಡಬಾರದಾಗಿ ತಿಳುವಳಿಕೆ ನೀಡಿದರೂ ಕೂಡ ಸಮವಸ್ತ್ರದಲ್ಲಿದ್ದ ಪೊಲೀಸರ ಎದುರಿನಲ್ಲಿಯೇ ಪರಸ್ಪರ ಬೈದಾಡುತ್ತಾ ದೂಡಾಡಿಕೊಂಡು ಕೈ-ಕೈ ಮಿಲಾಯಿಸಿ ಸಾರ್ವಜನಿಕ ಸ್ಥಳದಲ್ಲಿ ಭಯದ ಮತ್ತು ಪ್ರಕ್ಷುಬ್ದ ವಾತಾವರಣ ಉಂಟು ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಕಲಂ: 194(2) BNS ರಂತೆ ಪ್ರಕರಣ ದಾಖಲಾಗಿದೆ.

error: No Copying!