
- ಬೈಂದೂರು: ದಿನಾಂಕ :30-05-2025 (ಹಾಯ್ ಉಡುಪಿ ನ್ಯೂಸ್) ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಹೇಮ (23) ಎಂಬವರು ಗಂಡ ನಾಗರಾಜ ರವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದು, ಇವರು ಖಾಸಗಿ ಬಸ್ಸಿನಲ್ಲಿ ಚಾಲಕ ಕೆಲಸ ಮಾಡಿಕೊಂಡಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
- ದಿನಾಂಕ 19/05/2025 ರಂದು ಬೆಳಿಗ್ಗೆ 11:00 ಗಂಟೆಗೆ ಮನೆಯಿಂದ ಡ್ಯೂಟಿಗೆ ಹೋಗುವುದಾಗಿ ಹೇಳಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ ಎಂದು ಹೇಮ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
- ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಕಲಂ: ಮನುಷ್ಯ ಕಾಣೆಯಂತೆ ಪ್ರಕರಣ ದಾಖಲಾಗಿದೆ.