Spread the love

ಕೋಟ : ದಿನಾಂಕ: 02/06/2025(ಹಾಯ್ ಉಡುಪಿ ನ್ಯೂಸ್)ರಂದು ಸಾಲಿಗ್ರಾಮ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಕೋಟ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸುಧಾಪ್ರಭು ಅವರು ಬಂಧಿಸಿದ್ದಾರೆ.

ಕೋಟ ಪೊಲೀಸ್‌ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ (ತನಿಖೆ) ಸುಧಾ ಪ್ರಭು ಅವರು ದಿನಾಂಕ :01-06-2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಚಿತ್ರಪಾಡಿ ಗ್ರಾಮದ ಸಾಲಿಗ್ರಾಮ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದಂತೆ ಕೂಡಲೇ ಸ್ಥಳಕ್ಕೆ ತೆರಳಿ ಅಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಆರೋಪಿತ ವಿಜಯ ಎಂಬವನನ್ನು ಬಂಧಿಸಿದ್ದಾರೆ. ಹಾಗೂ ಜುಗಾರಿ ಆಟಕ್ಕೆ ಸಂಬಂಧಿಸಿದ ನಗದು ರೂಪಾಯಿ 1400/- ಹಾಗೂ ಮಟ್ಕಾ ಸಂಖ್ಯೆ ಬರೆದ ಚೀಟಿ,ಮಟ್ಕಾ ಬರೆಯಲು ಉಪಯೋಗಿಸಿದ ಬಾಲ್‌ಪೆನ್ ನ್ನು ಹಾಗೂ ಜುಗಾರಿ ಆಟಕ್ಕೆ ಬಳಸಿದ ಮೊಬೈಲ್ ಪೋನ್ ನ್ನು ಸ್ವಾದೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ  ಕಲಂ: 78 KP Act ಮತ್ತು 112 BNS ರಂತೆ ಪ್ರಕರಣ ದಾಖಲಾಗಿದೆ.

error: No Copying!