Spread the love

ಬ್ರಹ್ಮಾವರ: ದಿನಾಂಕ:06-06-2025(ಹಾಯ್ ಉಡುಪಿ ನ್ಯೂಸ್) ದಿನೇಶ್ ಪೂಜಾರಿ ಎಂಬವರ ದೂರಿನ ಮೇರೆಗೆ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕೊಡಲು 20,000 ಲಂಚಕ್ಕೆ ಬೇಡಿಕೆ ಇಟ್ಟ ಬ್ರಹ್ಮಾವರ ಮೆಸ್ಕಾಂ ನ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಅಶೋಕ ಪೂಜಾರಿ ಎಂಬವನನ್ನು ಲಂಚದ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು  ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧೀಕ್ಷಕರಾದ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಜುನಾಥ್ ಶಂಕರ್ ಪ್ರಭಾರ ಪೊಲೀಸ್ ಉಪ ಅಧೀಕ್ಷಕರು. ಇನ್ಸ್ಪೆಕ್ಟರ್ ರಾಜೇಂದ್ರ ನಾಯಕ್ ಎಂ.ಏನ್ ಹಾಗೂ ಭಾರತಿ, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಸತೀಶ್,  ಮಲ್ಲಿಕಾ,ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

error: No Copying!