
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ದೇಶದಾದ್ಯಂತ ಪಕ್ಷ ಸಂಘಟನಾ ಪರ್ವ ನಡೆಯುತ್ತಿದ್ದು ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಜಿಲ್ಲೆಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಗೆ ನೂತನ ಅಧ್ಯಕ್ಷರನ್ನಾಗಿ ಕುತ್ಯಾರ್ ನವೀನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಪರ್ವ 2024-25ರ ರಾಜ್ಯ ಚುನಾವಣಾಧಿಕಾರಿ ಗಣೇಶ್ ಕಾರ್ಣಿಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.