Spread the love

ಉಡುಪಿ: ದಿನಾಂಕ:12-06-2025(ಹಾಯ್ ಉಡುಪಿ ನ್ಯೂಸ್) ಉಡುಪಿ ನಗರದ ವ್ಯಾಪ್ತಿಯಲ್ಲಿರುವ  ಆಟೋ ನಿಲ್ದಾಣಗಳಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ನಗರದ ಯಾವುದೇ ನಿಲ್ದಾಣದ ಆಟೋ ಚಾಲಕರಿಗೆ ಬಾಡಿಗೆ ಮಾಡಲು ಅವಕಾಶ ಕಲ್ಪಿಸಿ ಉಡುಪಿ ನಗರ ನಿಲ್ದಾಣಗಳ ಚಾಲಕರ ಮತ್ತು ಮಾಲಕರ ಒಕ್ಕೂಟ ಒಮ್ಮತದ ನಿರ್ಧಾರ ಕೈಗೊಂಡಿದೆ.

ಬನ್ನಂಜೆ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಉಡುಪಿ ನಗರ ನಿಲ್ದಾಣಗಳ ಚಾಲಕರ ಮತ್ತು ಮಾಲಕರ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ಈ ಹಿಂದೆ ಕೆಲವೊಂದು ಆಟೋ ಚಾಲಕರ ಮಧ್ಯೆ ನಡೆದ ಗಲಾಟೆಗಳಿಂದ ಎಲ್ಲ ಆಟೋ ಚಾಲಕರಿಗೆ ಸಮಸ್ಯೆ ಉಂಟಾಗಿತ್ತು. ಅಲ್ಲದೆ, ಪೊಲೀಸ್ ಕೇಸ್ ಗಳಿಂದ ಆಟೋ ಚಾಲಕರಿಗೆ ತುಂಬಾ ತೊಂದರೆ ಆಗಿತ್ತು. ಈ ಹಿನ್ನೆಲೆಯಲ್ಲಿ ಸಭೆ ನಡೆಸಿದ ಉಡುಪಿ‌ ನಗರ ವ್ಯಾಪ್ತಿಯ ಆಟೋ ಚಾಲಕರು ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

error: No Copying!