
ಉಡುಪಿ: ದಿನಾಂಕ:14-06-2025(ಹಾಯ್ ಉಡುಪಿ ನ್ಯೂಸ್) ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ -ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರದಿಂದ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವವಿರುವ ಹಿನ್ನೆಲೆಯಲ್ಲಿ ಜೂ.15ರಿಂದ ಸೆ.30 ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಕೊಡಲಾಗಿದೆ.ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ -ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.