Spread the love

ದಿನಾಂಕ:23-06-2025(ಹಾಯ್ ಉಡುಪಿ ನ್ಯೂಸ್)

ರಾಯಚೂರು: ರಾಯಚೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಒಟ್ಟು 936 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕವನ್ನು ಅನಾವರಣಗೊಳಿಸಿದರು. ಈ ಬಳಿಕ 371 ನೇ ದಶಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, “ನಮ್ಮ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದೆ. ಈ ಚುನಾವಣೆಯ ಸಮಯದಲ್ಲಿ ನಾವು 560 ಭರವಸೆಗಳನ್ನು ನೀಡಿದ್ದೆವು. ಈಗಾಗಲೇ, ಇವುಗಳಲ್ಲಿ 235 ಭರವಸೆಗಳನ್ನು ಈಡೇರಿಸಲಾಗಿದೆ ಮತ್ತು ಉಳಿದವುಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.

error: No Copying!