
ಮಂಗಳೂರು: ದಿನಾಂಕ:24-06-2025(ಹಾಯ್ ಉಡುಪಿ ನ್ಯೂಸ್) ದ.ಕ ಜಿಲ್ಲಾ ಯುವ ಜೆಡಿಎಸ್ ನಿಯೋಗವು ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಜಿಲ್ಲೆಗೆ ನೂತನವಾಗಿ ಆಗಮಿಸಿ ಅಧಿಕಾರ ಸ್ವೀಕರಿಸಿರುವ ಜಿಲ್ಲಾಧಿಕಾರಿ ದರ್ಶನ್ ಅವರನ್ನು ಭೇಟಿಯಾಗಿ ಸ್ವಾಗತ ಕೋರಿದರು.
ಈ ವೇಳೆ ಮಾತನಾಡಿದ ದ.ಕ.ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಜಿಲ್ಲೆಯಲ್ಲಿ ಮರಳು ಸಮಸ್ಯೆಯಿಂದಾಗಿ ಬಡವರು ಮನೆ ಕಟ್ಟಲು ಕೂಡ ಸಾಧ್ಯ ವಾಗದ ಪರಿಸ್ಥಿತಿ ಇದ್ದು ಈ ನಿಟ್ಟಿನಲ್ಲಿ ನೂತನ ಜಿಲ್ಲಾಧಿಕಾರಿಗಳು ಗಮನಹರಿಸುವಂತೆ, ಜಿಲ್ಲೆಯ ಶಾಂತಿ ಕಾಪಾಡುವಲ್ಲಿ ಪ್ರಮುಖ ಆದ್ಯತೆಯಾಗಿ ಪರಿಗಣಿಸುವಂತೆ ಜಿಲ್ಲೆಯ ಕಂದಾಯ ಇಲಾಖೆ ಯಲ್ಲಿ ಹಲವಾರು ಸಮಸ್ಯೆ ಗಳಿದ್ದು ಅದರ ಬಗ್ಗೆ ಕೂಡ ಗಮನ ಹರಿಸುವಂತೆ ಮನವಿ ಮಾಡಿದರು. ಅಲ್ಲದೆ ಪಕ್ಷದ ವತಿಯಿಂದ ಜಿಲ್ಲೆಯ ಅಭಿವೃದ್ಧಿ ಕುರಿತ ವಿಚಾರಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.